Bible Versions
Bible Books

Jeremiah 21 (KNV) Kannadam Old BSI Version

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
2 ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
3 ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
4 ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
5 ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
6 ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
7 ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
8 ನೀನು ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
9 ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
11 ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
12 ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
13 ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
15 ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
16 ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
17 ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
18 ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
19 ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
20 ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
21 ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
22 ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
23 ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
24 ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
25 ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
26 ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
27 ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
28 ಕೊನ್ಯನೆಂಬ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
29 ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
30 ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×