Bible Versions
Bible Books

Jeremiah 35 (KNV) Kannadam Old BSI Version

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
2 ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
3 ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
4 ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
5 ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
6 ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
7 ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
8 ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
9 ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
10 ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
12 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
13 ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
14 ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
15 ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
16 ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
17 ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
18 ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
19 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
20 ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ವಾಕ್ಯಗಳನ್ನೆಲ್ಲಾ ಹೇಳಿದರು.
21 ಆಗ ಅರಸನು ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
22 ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
23 ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
24 ಆದಾಗ್ಯೂ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
25 ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
26 ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
27 ಆಗ ಅರಸನು ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
28 ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
29 ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಸುರಳಿಯನ್ನು ಸುಟ್ಟಿದ್ದೀ.
30 ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
31 ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
32 ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×