Bible Versions
Bible Books

Jeremiah 43 (KNV) Kannadam Old BSI Version

1 ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
3 ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
4 ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
5 ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
6 ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
7 ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
8 ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
9 ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
10 ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
11 ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
12 ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
13 ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
14 ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
15 ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
16 ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
17 ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
19 ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
20 ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
21 ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
22 ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
23 ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಕೇಡು ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
24 ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
26 ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
27 ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
28 ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
29 ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
30 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×