Bible Versions
Bible Books

Psalms 48 (KNV) Kannadam Old BSI Version

1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
7 ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.
8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
9 ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
10 ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
14 ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×